
ನವದೆಹಲಿ: ಪ್ರಥಮ ದರ್ಜೆ ಕ್ರಿಕೆಟ್ ಆಟಗಾರ, ಐ.ಪಿ.ಎಲ್.ನಲ್ಲಿ ಪಂಜಾಬ್ ತಂಡವನ್ನು ಪ್ರತಿನಿಧಿಸಿದ್ದ ಪರ್ವೀಂದರ್ ಅವಾನಾ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.
ಗ್ರೇಟರ್ ನೋಯ್ಡಾದಲ್ಲಿ ಪರ್ವೀಂದರ್ ಕಾರಿನಲ್ಲಿ ಬರುವಾಗ, ಯುವತಿಯೊಂದಿಗೆ ಬಂದಿದ್ದ ಐವರು ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ.
ಬಳಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಪರ್ವೀಂದರ್ ಗೆ ಗಾಯಗಳಾಗಿದ್ದು, ಅವರ ಕಾರಿಗೂ ಹಾನಿಯಾಗಿದೆ. ದುಷ್ಕರ್ಮಿಗಳು ಘಂಗೋಲಾ ಗ್ರಾಮಕ್ಕೆ ಸೇರಿದವರು ಎಂದು ಪೊಲೀಸರು ಹೇಳಿದ್ದಾರೆ.
ಪರ್ವೀಂದರ್ 2012 ರಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟಿ 20 ಪಂದ್ಯಕ್ಕೆ ಆಯ್ಕೆಯಾಗಿದ್ದರು. ಈ ಹಿಂದೆಯೂ ದೆಹಲಿಯಲ್ಲಿ ಅವರ ಮೇಲೆ ಹಲ್ಲೆ ನಡೆಸಲಾಗಿತ್ತು.
ನೋಯ್ಡಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.