

ಖ್ಯಾತ ಟಾಲಿವುಡ್ ನಟ ಪವನ್ ಕಲ್ಯಾಣ್ ರ ಜನ ಸೇನಾ ಪಕ್ಷಕ್ಕೆ ಭಾರತ ತಂಡದ ಮಾಜಿ ಕ್ರಿಕೆಟಿಗ ವೇಣುಗೋಪಾಲ್ ರಾವ್ ಸೇರ್ಪಡೆಗೊಂಡಿದ್ದಾರೆ.
ವಿಶಾಖಪಟ್ಟಣದಲ್ಲಿ ಪವನ್ ಕಲ್ಯಾಣ್ ರನ್ನು ಭೇಟಿ ಮಾಡಿದ ವೇಣುಗೋಪಾಲ್ ರಾವ್, ಅಧಿಕೃತವಾಗಿ ಜನ ಸೇನಾ ಪಕ್ಷ ಸೇರ್ಪಡೆಗೊಂಡಿದ್ದಾರೆ.
ಇತ್ತೀಚೆಗೆ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟಿರುವ ವೇಣುಗೋಪಾಲ್ ರಾವ್, ಈ ಹಿಂದೆ ಭಾರತದ ಪರ 16 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅಲ್ಲದೆ ಐಪಿಎಲ್ ನಲ್ಲಿ ಡೆಕ್ಕನ್ ಚಾರ್ಜರ್ಸ್, ಡೆಲ್ಲಿ ಡೇರ್ ಡೆವಿಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಕಣಕ್ಕಿಳಿದಿದ್ದರು.