

ಕ್ರಿಕೆಟಿಗನನ್ನು ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ರಾಕೇಶ್ ಪನ್ವಾರ್ ಕೊಲೆಯಾದ ಕ್ರಿಕೆಟಿಗ.
ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಮೂವರು ಅಪರಿಚಿತರು ಬೈಕ್ ನಲ್ಲಿ ಬಂದು ರಾಕೇಶ್ ಗೆ ಚಾಕುವಿನಿಂದ ಇರಿದು ಅಲ್ಲಿಂದ ಪರಾರಿಯಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ರಾಕೇಶ್‍ನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಅಷ್ಟರಲ್ಲಿ ತೀವ್ರ ರಕ್ತಸ್ರಾವದಿಂದ ರಾಕೇಶ್ ಕೊನೆಯುಸಿರೆಳೆದಿದ್ದಾನೆ.
ಕ್ರಿಕೆಟ್ ಕೋಚ್ ಆಗಿಯೂ ಕೆಲಸ ಮಾಡುತ್ತಿದ್ದ ರಾಕೇಶ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದುದ್ದೇ ಕೊಲೆಗೆ ಕಾರಣ ಅಂತಾ ಆತನ ಸ್ನೇಹಿತರು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.